Latest

*ಹೋರಿ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಇಬ್ಬರು ಯುವಕರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಸಂಕ್ರಾಂತಿ ಹಬ್ಬದ ನಿಮಿತ್ತ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಯುವಕರು ಹೋರಿ ತಿವಿದು ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆ ಬೆಳಕಿಗೆ ಬಂದಿದೆ. ರಂಗನಾಥ್ (24 ಹಾಗೂ ಲೋಕೇಶ್ (32) ಮೃತ ದುರ್ದೈವಿಗಳು.

 

ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮಾಳೂರು ಗ್ರಾಮ ಹಾಗೂ ಕೊನಗನಹಳ್ಳಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬಳಿಯ ಮಾಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗಿಂಡಿದ್ದ ರಂಗನಾಥ್ ಗೆ ಹೋರಿ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.

 

Home add -Advt

ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದೇ ವೇಳೆ ಶಿವಮೊಗ್ಗದಲ್ಲಿಯೇ ನಡೆದ ಮತ್ತೊಂದು ಘಟನೆಯಲ್ಲಿ ಯುವಕ ಬಲಿಯಾಗಿದ್ದಾನೆ. ಕೊನಗನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಲೋಕೇಶ್ ಎಂಬುವವರು ಭಾಗವಹಿಸಿದ್ದರು. ಸ್ಪರ್ಧೆಯ ವೇಳೆ ಹೋರಿ ಲೋಕೇಶ್ ಎದೆಗೆ ತಿವಿದಿದೆ. ಗಂಭೀರ ಸ್ಥಿತಿ ತಲುಪಿದ್ದ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

 

*BREAKING NEWS: ಸ್ಯಾಂಟ್ರೋ ರವಿ ಪ್ರಕರಣ; CIDಗೆ ವರ್ಗಾವಣೆ* https://pragati.taskdun.com/santro-ravi-casecidhome-miniser-araga-jnanendra/

Related Articles

Back to top button