Karnataka NewsLatestPolitics

*ಸರ್ವಪಕ್ಷ ಸಭೆಯಲ್ಲಿ ನಿರ್ಧಾರವಾಗುವವರೆಗೂ ತಮಿಳುನಾಡಿಗೆ ನೀರು ಬಿಡಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಆಗೋವರೆಗೂ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್‌ ನೀರು ಹರಿಸಬೇಕೆಂಬ CWMA ಆದೇಶ ಕುರಿತು ಪ್ರತಿಕ್ರಿಯಿಸಿ, ಸದ್ಯಕ್ಕೆ ಕುಡಿಯೋ ನೀರಿಗೆ ಸಮಸ್ಯೆಯಿಲ್ಲ, ಆದ್ರೆ ರೈತರಿಗೆ ಬೆಳೆ ಬೆಳೆಯೋಕೆ ನೀರು ಕೊಡಲು ಆಗಲ್ಲ ಎಂದಿದ್ದಾರೆ.

Home add -Advt

CWMA ನೀರು ಬಿಡೋಕೆ ಹೇಳಿದೆ. ಕಳೆದ 30 ವರ್ಷಗಳಿಂದ ವಾದ ಮಾಡಿದ್ದವರೇ ಈಗಲೂ ವಾದ ಮಾಡಿದ್ದಾರೆ. ಇನ್ನೂ ಭಾನುವಾರ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದಾರೆ. ವಿಪಕ್ಷಗಳ ಸಲಹೆ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ಸಭೆ ಆಗೋವರೆಗೂ ನೀರು ಬಿಡಲ್ಲ ಎಂದು ತಿಳಿಸಿದರು.

ಬಿಜೆಪಿ ಪ್ರತಿಭಟನೆ ಮಾಡೋ ಅವಶ್ಯಕತೆ ಇರಲಿಲ್ಲ. ನಾವು ರೈತರ ಹಿತಾಸಕ್ತಿ ಗಮನ ಇಟ್ಟುಕೊಂಡು ಮೇಲ್ಮನವಿ ಹೋಗಿದ್ದು, ಸರ್ವಪಕ್ಷಗಳ ಸಭೆ ಕರೆದಿದ್ದೇವೆ. ನೆಲ, ಜಲ, ಭಾಷೆ ಬಂದಾಗ ಒಟ್ಟಾಗಿ ಹೋಗಬೇಕು. ನಾವು ಬಿಜೆಪಿಗೆ ಹಿಂದೆ ಸಹಕಾರ ಮಾಡಿದ್ವಿ. ಮುಂದೆ ಏನ್ ಮಾಡಬೇಕು ಅಂತ ವಿಪಕ್ಷಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ. ವರ್ಷಕ್ಕೆ 40 TMC ನೀರು ಕುಡಿಯೋಕೆ ಬೇಕು. ಮಳೆ ಬಂದರೆ ಸಮಸ್ಯೆ ಇರುವುದಿಲ್ಲ. ಕಳೆದ ವರ್ಷ ಮಳೆ ಬಂದಿತ್ತು ಏನೂ ಸಮಸ್ಯೆ ಆಗಿಲ್ಲ. ಈ ವರ್ಷ ಮಳೆ ಕಡಿಮೆ ಇದೆ. ಸ್ವಲ್ಪ ಮಳೆ ಬಂದಿದ್ದು ನಮಗೆ ಅನುಕೂಲ ಆಗಿತ್ತು. ಮೆಟ್ಟೂರು ಡ್ಯಾಂನಲ್ಲಿ ನೀರು ಇದೆ. ಅವರಿಗೆ ಕುಡಿಯೋ ನೀರಿಗೆ ಸಮಸ್ಯೆ ಇಲ್ಲ. ರಾಜ್ಯಕ್ಕೆ ವಿಜಯ್ ಬರ್ತಾರೆ. ಈ ವಿಚಾರವೂ ಚರ್ಚೆ ಆಗುತ್ತದೆ ಎಂದು ತಿಳಿಸಿದ್ದಾರೆ.

Related Articles

Back to top button