Kannada NewsKarnataka NewsLatest

*ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ ವಿಚಾರವಾಗಿ ಅವರ ಜೊತೆ ಮಾತನಾಡುತ್ತೇನೆ. ಅವರು ಜಲಸಂಪನ್ಮೂಲ ಬದಲು ಬೇರೆ ಖಾತೆ ಕೇಳಿದ್ದಾರೆ. ಈ ಬಗ್ಗೆ ನಾನು ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.

Home add -Advt

ರಾಮಲಿಂಗಾರೆಡ್ಡಿ ಹಿರಿಯ ನಾಯಕರು, ಅವರು ನನಗೆ ಬಹಳ ಆಪ್ತರು. ನೋಡೋಣ ಅವರೊಂದಿಗೆ ನಾನು ಮಾತನಾಡುತ್ತೇನೆ. ಎಲ್ಲವನ್ನೂ ಸರಿಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಿಎಂ ಹೇಳಿದ್ದೇನು?

“ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ರಾಮಲಿಂಗಾ ರೆಡ್ಡಿ ಅವರು ರಾಜಿನಾಮೆ ನೀಡಿರುವ ಬಗ್ಗೆ ಕೇಳಿದಾಗ, “ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ” ಎಂದು ತಿಳಿಸಿದರು.

ಕೆಲವು ಕಾರ್ಯಕರ್ತರು ರಾಜಿನಾಮೆ ನೀಡುತ್ತಿರುವ ಬಗ್ಗೆ ಕೇಳಿದಾಗ, “ಏನೇ ಇದ್ದರು ಶಿಸ್ತು ಬಹಳ ಮುಖ್ಯ” ಎಂದು ತಿಳಿಸಿದರು.

ಅಣ್ಮಮ್ಮ ದೇವಿ ಆಶೀರ್ವಾದ:

ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಣ್ಣಮ್ಮ ದೇವಿ ಬೆಂಗಳೂರಿನ ಗ್ರಾಮ ದೇವತೆ. ನಾಡಿನ ದೇವತೆ ಚಾಮುಂಡಿ ತಾಯಿ. ತಾಯಿ ದರ್ಶನ ಮಾಡಿ ಆಶೀರ್ವಾದ ಪಡೆದು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಸಮೃದ್ಧಿ, ನೆಮ್ಮದಿ, ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಕೆಲಸ ಪ್ರಾರಂಭಿಸಿದ್ದೇನೆ” ಎಂದು ತಿಳಿಸಿದರು.


Related Articles

Back to top button