Latest

*ಬಿಜೆಪಿ ರೀತಿ ನಾವು ಮಾತಿಗೆ ತಪ್ಪಿಲ್ಲ; ನುಡಿದಂತೆ ನಡೆದಿದ್ದೇವೆ ಎಂದ ಸಾರಿಗೆ ಸಚಿವ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದ್ದು, ನಾವು ನುಡಿದಂತೆ ನಡೆದಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ದಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ರಾಜ್ಯಾದ್ಯಂತ ಇಂದು ಏಕಕಾಲದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ದೊರೆಯುತ್ತಿದೆ. ನಾವು ಚುನಾವಣೆಗೂ ಮುನ್ನ ಜನರಿಗೆ ಏನು ಭರವಸೆ ಕೊಟ್ಟಿದ್ದೇವೆ ಅದನ್ನು ಈಡೇರಿಸುತ್ತಿದ್ದೇವೆ. ಬಿಜೆಪಿ ರೀತಿ ನುಡಿದು ಮಾತಿಗೆ ತಪ್ಪಿಲ್ಲ. ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಮೂರು ತಿಂಗಳ ಒಳಗಾಗಿ ಉಚಿತ ಬಸ್ ಪ್ರಯಾಣಿಸುವ ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಅಲ್ಲಿಯವರೆಗೆ ಆಧಾರ್ ಕಾರ್ಡ್, ವೋಟರ್ ಐಡಿ, ಡಿಎಲ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಿದರು.

https://www.pragativahini.com/karnatakaheavy-rainyellow-alert/

Home add -Advt

Related Articles

Back to top button