
ಪ್ರಗತಿವಾಹಿನಿ ಸುದ್ದಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಾಳೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು, ಕರವೇ ಕಾರ್ಯಕರ್ತರು ಎಂಇಎಸ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಇನ್ನೊಂದೆಡೆ ಮಹಾರಾಷ್ಟ್ರದಲ್ಲಿಯೂ ಪ್ರತಿಭಾನೆಗಳು ಹೆಚ್ಚುತ್ತಿವೆ. ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಸಾರಿಗೆ ಸಚಿವರ ಭೇಟಿ ಮಹತ್ವ ಪಡೆದುಕೊಂಡಿದೆ. ಸಾರಿಗೆ ಸಚಿವರ ಭೇಟಿ ಹಿನ್ನೆಲೆಯಲ್ಲಿ ಪೊಲೀಸರು, ಜಿಲ್ಲಾಡಳಿತ ಸೂಕ್ತ ಭದ್ರತೆ ಕೈಗೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ