
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಕಥೆ ಶೋಚನೀಯವಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ದಿ.ಅನಂತಕುಮಾರ್ ಪಕ್ಷವನ್ನು ಕಟ್ಟಿ ಬೆಳೆಸಿದರು. ಬೇರೆ ಬೇರೆ ಪಕ್ಷದವನ್ನು ಬಿಜೆಪಿಗೆ ಕರೆ ತಂಡರು. ಆದರೆ ಈಗ ಪಕ್ಷದ ವಿರುದ್ಧವೇ ಮುಖಂಡರು ಸಿಡಿದೇಳುತ್ತಿದ್ದು, ಹಲವು ನಾಯಕರು ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಬಿಜೆಪಿ ಕಥೆ ಮುಗಿದಿದೆ. ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಗೆ ಬರುತ್ತಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ 50-60 ಸ್ಥಾನ ಬಂದರೆ ಹೆಚ್ಚು ಎಂದರು.
ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 120 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಬಿಜೆಪಿ ಒಳಜಗಳ, ಕಚ್ಚಾಟದಿಂದಾಗಿ ಕಾಂಗ್ರ್ಸ್ ಗೆ 150 ಸ್ಥಾನ ಬಂದರೂ ಅಚ್ಚರಿಯಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರವಾಗಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ನಲ್ಲಿ ನಾನೂ ಕೂಡ ಸೀನಿಯರ್. ನಾನೂ ಮುಖ್ಯಮಂತ್ರಿ ಹುದ್ದೆಗೆ ಅರ್ಹನಾಗಿದ್ದೇನೆ. ಆದರೆ ಸ್ಪರ್ಧೆಯಲ್ಲಿ ಇಲ್ಲ. ಸಿಎಂ ಆಗಲು ಆಸೆ ಇಟ್ಟುಕೊಂಡವರು ಆಗಲಿ. ನಮಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ ಎಂದು ತಿಳಿಸಿದರು.