*ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೋವಿಡ್; ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ದೃಢ*
ಪ್ರಗತಿವಾಹಿನಿ ಸುದ್ದಿ; ರಾಮನಗರ: ಪಕ್ಕದ ರಾಜ್ಯ ಕೇರಳಲ್ಲಿ ಕೊರೊನಾ ಅಟ್ಟಹಾಸ ಆರಂಭವಾಗಿರುವಾಗಲೇ ರಾಜ್ಯದಲ್ಲಿಯೂ ಮಹಾಮಾರಿ ಕಾಲಿಟ್ಟಿದ್ದು, ಮಂಡ್ಯದ ಬಳಿಕ ಇದೀಗ ರಾಮನಗರದಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿದೆ.
ರಾಮನಗರ ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿ ಬಿಡದಿ ಹೋಬಳಿಯ ಬೈರಮಂಗಲದ ನಿವಾಸಿ.
ರ್ಯಾಂಡಮ್ ಟೆಸ್ಟ್ ನಲ್ಲಿ ವಿದ್ಯಾರ್ಥಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ತೀವ್ರತರವಾದ ಸೋಂಕು ಇಲ್ಲದ ಕಾರಣಕ್ಕೆ 2 ದಿನಗಳ ಕಾಲ ವಿದ್ಯಾರ್ಥಿಯನ್ನು ಐಸೋಲೇಷನ್ ಮಾಡಲಾಗಿದೆ. ಈ ಬಗ್ಗೆ ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಾಂತರಾಜು ಮಾಹಿತಿ ನೀಡಿದ್ದಾರೆ.
ಇನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿಯೂ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಾರೆ ರಾಜ್ಯದಲ್ಲಿಯೂ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯ ಆರೋಗ್ಯ ಇಲಾಖೆ ಕಟ್ಟೆಚ್ಚರಿಕ್ಕೆ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ