Kannada NewsKarnataka NewsLatest

*ಅಪ್ರಾಪ್ತೆಗೆ ಚಾಕು ಇರಿದು ಕಿಡ್ನ್ಯಾಪ್; ಸಿನಿಮಾ ಸ್ಟೈಲ್ ನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಹಾಡ ಹಗಲೇ ಅಪ್ರಾಪ್ತ ಯುವತಿಗೆ ಚಾಕು ಇರಿದು ಆಕೆಯನ್ನು ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಅಪಹರಿಸಿದ್ದ ದುಷ್ಕರ್ಮಿಯನ್ನು ರಾಮನಗರ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದರೆ.

ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಇನೋವಾ ಕಾರಿನಲ್ಲಿ ಬಂದ ದುಷ್ಕರ್ಮಿ, ಯುವತಿಗೆ ಚಾಕು ಇರಿದು, ಆಕೆಯನ್ನು ಕಾರಿನಲ್ಲಿ ಎಳೆದೊಯ್ದು ಪರಾರಿಯಾಗಿದ್ದ.

ಸ್ಥಳೀಯರು ಈ ಅಪಹರಣವನ್ನು ತಪ್ಪಿಸಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಅಪಹರಣಕಾರನ ಕಾರನ್ನು ಚೇಸ್ ಮಾಡಿಕೊಂಡು ಹೋಗಿದ್ದರು.

ಇದೀಗ ಯುವತಿಯನ್ನು ಅಪಹರಿಸಿದ್ದ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು, ಯುವತಿ ಸಂಜನಾಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button