
ಪ್ರಗತಿವಾಹಿನಿ ಸುದ್ದಿ; ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಕೆಂಪೇಗೌಡನದೊಡ್ಡಿಯಲ್ಲಿ ನಡೆದಿದೆ.
ರಾಜೇಶ್ (42) ಹಾಗೂ ಉಮಾ (35), ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಕ್ಕಳು, ಓರ್ವ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ