ಪ್ರಗತಿವಾಹಿನಿ ಸುದ್ದಿ: ‘ರಾಮನಗರ’ ಜಿಲ್ಲೆ ಇನ್ಮುಂದೆ ‘ಬೆಂಗಳೂರು ದಕ್ಷಿಣ’ ಜಿಲ್ಲೆಯಾಗಿ ಮರುನಾಮಕರಣಗೊಳ್ಳಲಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಲಿದೆ ಎಂದರು.
ರಾಮನಗರ ಹೆಸರು ಮಾತ್ರ ಬದಲಾವಣೆಯಾಗಲಿದೆ. ಉಳಿದಂತೆ ಎಲ್ಲವೂ ಯಥಾಸ್ಥಿಯಲ್ಲೇ ಇರುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರ ರಾಮನಗರದಲ್ಲಿಯೇ ಇರಲಿದೆ. ಇದರಡಿ ಐದು ತಾಲೂಕುಗಳು ಸೇರ್ಪಡೆಗೊಳ್ಳಲಿವೆ. ಈ ಮೂಲಕ ರಾಮನಗರ ಜಿಲ್ಲೆಗೆ ಬ್ರ್ಯಾಂಡ್ ಬೆಂಗಳೂರು ಹೆಸರು ಸೇರಿಸಬೇಕು ಎಂಬ ನಿಟ್ಟಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಡೆಸಿದ್ದ ಪ್ರಯತ್ನ ಇದೀಗ ಸಫಲವಾದಂತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ