ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಮನಗರದ ರಾಮ ದೇವರ ಬೆಟ್ಟದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುತ್ತೇವೆ. ದಕ್ಷಿಣ ಅಯೋಧ್ಯೆ ಕೇಂದ್ರ ಸ್ಥಾನವನ್ನಾಗಿ ಮಾಡುತ್ತೇವೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, ಉತ್ತರ ಭಾರತದಂತೆಯೇ ದಕ್ಷಿಣ ಭಾರತದಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದೇವೆ. ಅಲ್ಲಿರುವ ರಾಮ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡಲಾಗುವುದು ಎಂದರು.
ದೇವಸ್ಥಾನದ ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಈಗಾಗಲೇ ಸೂಚಿಸಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಸಿಎಂ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ರಾಮನಗರ ನಾಮಕರಣ ಆಗಿರುವುದೇ ರಾಮನ ಹೆಸರಿನಲ್ಲಿ. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲಿಯೂ ರಾಮ ಮಂದಿರ ನಿರ್ಮಾಣವಾಗಲಿದೆ ಎಂಬ ವಿಶ್ವಾಸವಿದೆ. ಬರುವ ಬಜೆಟ್ ನಲ್ಲಿ ಹಣ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.
*ಯಾವ ಜಿಲ್ಲೆಯೂ ಯಾರಪ್ಪನ ಆಸ್ತಿಯಲ್ಲ; ಪ್ರಜಾಪ್ರಭುತ್ವದಲ್ಲಿ ಜಹಗೀರ್ ಇರಲು ಸಾಧ್ಯವಿಲ್ಲ*
https://pragati.taskdun.com/vidhanasabha-electionc-t-raviattackh-d-kumaraswamy/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ