*ಡಿ.ಕೆ.ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀಗಳ ಹಾರೈಕೆ*

ಪ್ರಗತಿವಾಹಿನಿ ಸುದ್ದಿ: “ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು ಶ್ರೀಮದ್‌ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಶ್ರೀಮದ್ ರಂಬಾಪುರಿ ಶ್ರೀಗಳು ಮಾತನಾಡಿದರು. “ಕರ್ನಾಟಕದಲ್ಲಿ ಕಾಂಗ್ರೆಸ್ ‌ಪ್ರಚಂಡ … Continue reading *ಡಿ.ಕೆ.ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀಗಳ ಹಾರೈಕೆ*