
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ಈ ಅಪಘತ ಸಂಭವಿಸಿದ್ದು, ಹರಪನಹಳ್ಳಿ ಮಾರ್ಗವಾಗಿ ಕಾರು ಬರುತ್ತಿದ್ದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ರಂಭಾಪುರಿ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ.
ಚಿರಸ್ತಿಹಳ್ಳಿಯ ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಕಾರಿಗೆ ಡಿಕ್ಕಿಹೊಡೆದಿದ್ದು, ಕಾರಿಗೆ ಬೈಕ್ ಗುದ್ದಿದ ಪರಿಣಾಮ ಎಂಜಿನ್ ಮೇಲೆ ಬೈಕ್ ಸವಾರ ಹಾರಿ ಬಿದ್ದಿದ್ದಾನೆ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ