Karnataka NewsLatestPolitics

*ಗೃಹಲಕ್ಷ್ಮಿಗೆ ಮೂರು ವರ್ಷ: ಮಹತ್ವದ ಸಂದೇಶ ರವಾನಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬಂದು ಇಂದಿಗೆ ಮೂರು ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ನಾಡಿನ 1.2+ ಕೋಟಿ ಕುಟುಂಬಗಳ ಒಡತಿಯರಿಗೆ ಈ ಯೋಜನೆಯು ಆರ್ಥಿಕ ಬಲದ ಜೊತೆಗೆ, ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನೂ ತುಂಬಿದೆ. ಇದು ಕೇವಲ ಒಂದು ಸರ್ಕಾರಿ ಸೌಲಭ್ಯವಲ್ಲ, ಮಹಿಳೆಯರ ನೆಮ್ಮದಿಯ ಬದುಕಿಗೆ ಸರ್ಕಾರವು ನೀಡುತ್ತಿರುವ ಪ್ರೀತಿಯ ಆಸರೆಯಾಗಿದೆ ಎಂದಿದ್ದಾರೆ.

​ಇದೇ ವೇಳೆ ಫಲಾನುಭವಿಗಳಲ್ಲಿ ಒಂದು ಸಣ್ಣ ಮನವಿ. ಸರ್ಕಾರದ ‘ಗ್ಯಾರಂಟಿ ಸಮಿತಿ’ಯವರು ನಿಮ್ಮ ಮನೆ ಬಾಗಿಲಿಗೆ ಬಂದಾಗ, ದಯವಿಟ್ಟು ಅವರಿಗೆ ಬೇಕಾದ ದಾಖಲೆಗಳನ್ನು ನೀಡಿ ಎಂದಿನಂತೆ ಪ್ರೀತಿಯಿಂದ ಸಹಕರಿಸಿ ಎಂದವರು ಮನವಿ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button