ಪ್ರಗತಿವಾಹಿನಿ ಸುದ್ದಿ: ಸಹಕಾರಿ ಅಪೆಕ್ಸ್ ಬ್ಯಾಂಕ್ ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಹಾಜರಾಗುಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಪ್ರೈ.ಲಿ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್ ನಿಂದ 232 ಕೋಟಿ 88 ಲಕ್ಷ ಸಾಲ ಪಡೆದು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲಿ ತಮ್ಮ ವಿರುದ್ಧ ದಾಖಲಾಗಿರುವ ವಂಚನೆ ಪ್ರಕರಣ ರದ್ದು ಕೋರಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿ ವಜಾಗೊಳಿಸಿದ್ದು, ತನಿಖೆಗೆ ಸಹಕರಿಸುವಂತೆ ತಿಳಿಸಿದೆ.
ಈ ವೇಳೆ ಸರ್ಕಾರದ ಪರ ವಕೀಲರು, ಸಿಐಡಿ ನೋಟೀಸ್ ನೀಡಿದರೂ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಾಲಯ, ಸಿಐಡಿ ತನಿಖೆಗೆ ಸಹಕರಿಸಬೇಕು. ಒಂದು ವೇಳೆ ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ