ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ
![](https://pragativahini.com/wp-content/uploads/2021/03/black-mail-cd-cse-1.jpg)
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ಮಾರುತಿ ವಿರುದ್ಧ ತನಿಖೆ ನಡೆಸುವಂತೆ 8ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಇದರ ವಿರುದ್ಧ ಪೊಲೀಸ್ ಅಧಿಕಾರಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿಚಾರಣೆಗೆ ತಡೆಯಾಜ್ಞೆ ನೀಡಿದೆ.
ರಮೇಶ್ ಜಾರಕಿಹೊಳಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಯುವತಿ ದೂರು ನೀಡಿದ್ದಳು. ಆದರೆ ಕಬ್ಬನ್ ಪಾರ್ಕ್ ಪೊಲೀಸರು ಎಫ್ ಐ ಆರ್ ದಾಖಲಿಸದೇ ನಿರ್ಭಯ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ ಅಯ್ಯರ್ ಪಿಸಿ ಆರ್ ದಾಖಲಿಸಿದ್ದರು. ಈ ದೂರಿನ ಆಧಾರದ ಮೇರೆಗೆ ಮೂವರು ಅಧಿಕಾರಿಗಳ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿತ್ತು.
ಆದರೆ ಇದೀಗ ಆದೇಶಕ್ಕೆ ತಡೆ ಬಿದ್ದಿದೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ