Latest

ರಮೇಶ್ ಜಾರಕಿಹೊಳಿ ಬಂಧನಕ್ಕೆ ಕಾಂಗ್ರೆಸ್ ಪಟ್ಟು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಡಿ ಪ್ರಕರಣ ನಡೆದು 3 ತಿಂಗಳಾಯಿತು. ಈವರೆಗೆ ಸಿಡಿಯಲ್ಲಿರುವುದು ನಾನಲ್ಲ ಎಂದು ಹೇಳಿಕೆ ನೀಡುತ್ತಿದ್ದ ರಮೇಶ್ ಜಾರಕಿಹೊಳಿ ಈಗ ಸಿಡಿಯಲ್ಲಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾರೆ. ಅತ್ಯಾಚಾರ ಆರೋಪವಿದ್ದರೂ ಅವರನ್ನು ಬಂಧಿಸದೇ ಓಡಾಡಿಕೊಂಡಿರಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರವೇ ಆರೋಪಿ ರಕ್ಷಣೆಯಲ್ಲಿ ತೊಡಗಿದೆ ಎಂದು ಕಿಡಿಕಾರಿದರು.

ತನಿಖಾ ಸಂಸ್ಥೆ ಎಸ್ ಐಟಿ ಮುಖ್ಯಸ್ಥರಿಗೆ ರಜೆಯ ಮೇಲೆ ಕಳುಹಿಸಿ, ರಮೇಶ್ ಜಾರಕಿಹೊಳಿ ಗೃಹ ಸಚಿವ ಬೊಮ್ಮಾಯಿ ಭೇಟಿಗೆ ಅವಕಾಶ ನೀಡಲಾಗಿದೆ. ಕಳೆದ ಶನಿವಾರ ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ ಬೊಮ್ಮಾಯಿ ಭೇಟಿಯಾಗಿ 2 ಗಂಟೆ ಚರ್ಚೆ ನಡೆಸಿದ್ದಾರೆ. ಬಳಿಕ ಪ್ರಹ್ಲಾದ್ ಜೋಶಿ ಭೇಟಿಯಾಗಿ ಚರ್ಚಿಸಿದ್ದಾರೆ. ರೇಪ್ ಕೇಸ್ ಆರೋಪಿಯನ್ನು ಬಂಧಿಸದೇ ಗೃಹ ಸಚಿವರನ್ನೇ ಭೇಟಿಯಾಗಲು ಅವಕಾಶ ನೀಡಿರುವುದು ದೇಶದಲ್ಲಿಯೇ ಮೊದಲ ಪ್ರಕರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ರಮೇಶ್ ಜಾರಕಿಹೊಳಿ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ರೇಪ್ ಕೇಸ್ ಆರೋಪಿಯನ್ನು ಬಂಧಿಸಿದೇ ಬಿಟ್ಟಿರುವುದು ಪೊಲೀಸರಿಗೆ ಘನತೆಯಲ್ಲ. ಇದು ಕರ್ನಾಟಕ ಪೊಲೀಸರ ಗೌರವದ ಪ್ರಶ್ನೆ. ಯಾರು ಏನೇ ಹೇಳಿದರೂ ಕೇಳದೇ ಮೊದಲು ಪೊಲೀಸರು ಆರೋಪಿಯನ್ನು ಬಂಧಿಸಿ, ಕಾನೂನು ಕ್ರಮ ಕೈಗೊಂಡು ತಮ್ಮ ಕರ್ತವ್ಯ ಪಾಲಿಸಬೇಕು ಎಂದರು.

ಇದು ಬಿಜೆಪಿ ಸರ್ಕಾರವಾಗಿ ಉಳಿದಿಲ್ಲ; ಸಚಿವ ಸಿ.ಪಿ.ಯೋಗೇಶ್ವರ್ ಅಸಮಾಧಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button