Kannada NewsKarnataka NewsLatest

ವಿಶೇಷ ವಿಮಾನದಲ್ಲಿ ಬರ್ತಾರಂತೆ ರಮೇಶ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಗೋಕಾಕ:  ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದಿ.೨೫ ರಿಂದ ೨೮ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ದಿ.೨೫ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ ೧೨.೩೦ ಗಂಟೆಗೆ ಬೆಳಗಾವಿ ಆಗಮಿಸುವರು. ಮಧ್ಯಾಹ್ನ ೨ ಗಂಟೆಗೆ ಗೋಕಾಕ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.

Home add -Advt

ದಿ.೨೬ ರಂದು ಬೆಳಿಗ್ಗೆ ೧೦ ಗಂಟೆಗೆ ಗೋಕಾಕ ನಗರದ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ ನಡೆಸುವರು.
ದಿ.೨೭ ರಂದು ಬೆಳಿಗ್ಗೆ ೯.೩೦ ಗಂಟೆಗೆ ಗೋಕಾಕ ರಸ್ತೆ ಮೂಲಕ ಹೊರಟು ಬೆಳಿಗ್ಗೆ ೧೧.೩೦ ಗಂಟೆಗೆ ಬೆಳಗಾವಿಯಲ್ಲಿ ಸರಕಾರದ ಒಂದು ವರ್ಷದ ಸಾಧನೆ ಬಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ ೪ ಗಂಟೆಗೆ ಬೆಳಗಾವಿ ಸ್ಮಾರ್ಟ ಸಿಟಿ ಬಗ್ಗೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು.

ದಿ. ೨೮ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಗೋಕಾಕನಿಂದ ರಸ್ತೆ ಮೂಲಕ ಬೆಂಗಳೂರು ಪ್ರಯಾಣ ಬೆಳೆಸುವರು.

 

Related Articles

Back to top button