
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ಕುತೂಹಲಕರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತು ಅವರ ಟೀಮ್ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಚರ್ಚೆ ನಡೆಸಿದೆ.
ಜೊತೆಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿಯಾಗಿ ರಮೇಶ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ.
ಹುಬ್ಬಳ್ಳಿಯ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ರಮೇಶ ಜಾರಕಿಹೊಳಿ ಶುಕ್ರವಾರ ರಾತ್ರಿ ಸುಮಾರು 2 ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರ ಮಧ್ಯೆ ಚರ್ಚೆ ನಡೆದಿರುವ ಸಾಧ್ಯತೆ ಇದೆ.
ಇದೇ ವೇಳೆ ಹುಬ್ಬಳ್ಳಿಯ ಖಾಸಗಿ ಹೊಟೆಲ್ ನಲ್ಲಿ ರಮೇಶ ಜಾರಕಿಹೊಳಿ ಮತ್ತು ಅವರ ಟೀಮ್ ನ ಕೆಲವು ಸಚಿವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಆರೋಗ್ಯ ಸಚಿವ ಡಾ. ಸುಧಾಕರ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮತ್ತಿತರರು ಭಾಗವಹಿಸಿದ್ದರೆನ್ನಲಾಗಿದೆ.
ರಾಜ್ಯ ರಾಜಕೀಯ ಬೆಳವಣಿಗೆ ಸಂಬಂಧ ಈ ಚರ್ಚೆ ನಡೆದಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ