Kannada NewsLatest

ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ: ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆಗೆ ಉಪಸ್ಥಿತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಗೆ ಆಗಮಿಸಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ನಂತರ ಇದೇ ಮೊದಲ ಬಾರಿಗೆ ಸ್ವ ಜಿಲ್ಲೆಗೆ ಆಗಮಿಸಿದ್ದಾರೆ. ಬೆಳಗ್ಗೆ ಗೋಕಾಕಕ್ಕೆ ಆಗಮಿಸಿದ್ದ ರಮೇಶ್ ಅಲ್ಲಿಂದ 9 ಗಂಟೆಗೆ ಬೆಳಗಾವಿಗೆ ಹೊರಟಿದ್ದಾರೆ. ಈಗಾಗಲೆ ಬೆಳಗಾವಿಯಲ್ಲಿರುವ ಅವರು ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿಭಾಗವಹಿಸುವರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲು ಹಾಗೂ ಹಲವಾರು ಸಚಿವರು ಉಪಸ್ಥಿತರಿರುವರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ಆಗಮಿಸಲಿದ್ದು, ನಾಮಪತ್ರ ಸಲ್ಲಿಕೆ ವೇಳೆ ಅವರು ತಲುಪುವ ಸಾಧ್ಯತೆ ಕಡಿಮೆ.  ನಂತರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಪಾಲ್ಗೊಂಡು, ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ.

ಯಡಿಯೂರಪ್ಪ ಬೆಳಗಾವಿ ಕಾರ್ಯಕ್ರಮದಲ್ಲಿ ಬದಲಾವಣೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button