Kannada NewsKarnataka NewsLatest

ಒಂದೇ ವೇದಿಕೆ ಮೇಲೆ ರಮೇಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿ ಪ್ರಚಾರ!

ಪ್ರಗತಿವಾಹಿನಿ ಸುದ್ದಿ, ಹಿರೇಬಾಗೇವಾಡಿ (ಬೆಳಗಾವಿ) – ವಿಧಾನ ಪರಿಷತ್ ಚುನಾವಣೆ ಕಣ ರಂಗೇರುತ್ತಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಶನಿವಾರ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಪರ ರಮೇಶ ಜಾರಕಿಹೊಳಿ ಮತ್ತು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಒಂದೇ ವೇದಿಕೆಯಲ್ಲಿ ಪ್ರಚಾರ ಮಾಡಿದರು.

ಬಿಜೆಪಿ ಅಭ್ಯರ್ಥಿ ಪರ ರಮೇಶ ಜಾರಕಿಹೊಳಿ ಮತ ಯಾಚನೆ ಮಾಡಿದರು. ಬಿಜೆಪಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಅವರು ಮನವಿ ಮಾಡಿದರು.

ರಮೇಶ ಜಾರಕಿಹೊಳಿ ತೆರಳಿ 10 ನಿಮಿಷದ ನಂತರ ಅಲ್ಲಿಗೆ ಆಗಮಿಸಿದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅದೇ ವೇದಿಕೆ ಮೇಲೆ ನಿಂತು ತಮಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ವಿನಂತಿಸಿದರು.

Home add -Advt

ಈ ವೇದಿಕೆಯನ್ನು ರಾಜೇಂದ್ರ ಅಂಕಲಗಿ ನೇತೃತ್ವದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ನಿರ್ಮಾಣ ಮಾಡಿದ್ದರು ಎನ್ನಲಾಗಿದೆ. ಒಂದೇ ವೇದಿಕೆಯನ್ನು ಇಬ್ಬರೂ ಬಳಸಿದ್ದು ವಿಶೇಷವಾಗಿತ್ತು.

ಒಮಿಕ್ರಾನ್ ಭೀತಿ; ಬೆಳಗಾವಿ ಅಧಿವೇಶನಕ್ಕೂ ಅನಿಶ್ಚಿತತೆ ?

ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ನಾನು …. ಆಗಲಿಕ್ಕೂ ಸಿದ್ದ – ಸತೀಶ್ ಜಾರಕಿಹೊಳಿ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button