ಪ್ರಗತಿವಾಹಿನಿ ಸುದ್ದಿ, ಅಥಣಿ – ಸಂಕ್ರಾಂತಿ ನಂತರ ರಾಜ್ಯದಲ್ಲಿ ಸಚಿವಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಸುದ್ದಿಯ ಮಧ್ಯೆಯೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಆರ್ ಎಸ್ಎಸ್ ಹಿರಿಯ ಮುಖಂಡ ಅರವಿಂದ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಥಣಿಯಲ್ಲಿರುವ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿದ ಅವರು ಕೆಲ ಹೊತ್ತು ಮಾತುಕತೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಈ ಭಾಗದ ಪ್ರವಾಸಕ್ಕೆಂದು ಬಂದಾಗ ಹಿರಿಯರನ್ನು ಭೇಟಿಯಾಗುವ ರೂಢಿಯನ್ನು ಬೆಳೆಸಿಕೊಂಡು ಬಂದಿದ್ದೇನೆ. ಈಗಲೂ ಭೇಟಿಯಾಗಿದ್ದೇನೆ. ಅದರಲ್ಲಿ ವಿಶೇಷವೇನಿಲ್ಲ ಎಂದರು.
ಮಂತ್ರಿಸ್ಥಾನಕ್ಕಾಗಿ ಲಾಬಿ ನಡೆಸಲು ಅರವಿಂದ್ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿದ್ದಿರಾ ಎನ್ನುವ ಮಾಧ್ಯಮದವರ ಪ್ರಶ್ನೆ, ಅಂತಾದ್ದೇನಿಲ್ಲ. ನನ್ನ ಭೇಟಿಯ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು. ಆದರೆ ಎಲ್ಲ ವಿಷಯಗಳನ್ನೂ ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ ಎಂದೂ ಅವರು ಹೇಳಿದರು.
2023ರ ಚುನಾವಣೆ ಸಂಬಂಧ ಅರವಿಂದರಾವ್ ದೇಶಪಾಂಡೆ ಅವರ ಜೊತೆ ಚರ್ಚಿಸಿದ್ದೇನೆ. ಸಧ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಮಹೇಶ ಕುಮಟಳ್ಳಿಗೂ ಒಳ್ಳೆಯದಾಗಲಿದೆ ಎಂದು ರಮೇಶ ಜಾರಕಿಹೊಳಿ ಹೇಳಿದರು.
ದೇಶದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕ: ಸಂಕ್ರಾಂತಿ ಸಂದೇಶದಲ್ಲಿ ಪ್ರಧಾನಿ ಬಣ್ಣನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ