Kannada NewsKarnataka NewsLatest

ರಮೇಶ್ ಜಾರಕಿಹೊಳಿ ಆಪರೇಶನ್ ಫೇಲ್: ಸುಳೇಬಾವಿಯಲ್ಲಿ ತೀವ್ರ ಮುಖಭಂಗ

ಲಕ್ಷ್ಮಿ ಹೆಬ್ಬಾಳಕರ್ ಗೆ ಕೈ ಕೊಟ್ಟಿದ್ದ ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆಗೆ ಭಾರಿ ಸೋಲು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳೇಬಾವಿಯಲ್ಲಿ ಆಪರೇಶನ್ ಕಮಲ ಮಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಆಪರೇಶನ್ ಸಕ್ಸಸ್ ಬಟ್ ಪೇಶಂಟ್ ಡೈಯ್ಡ್ ಎನ್ನುವಂತಾಗಿದೆ.

ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲಕ್ಷ್ಮಿ ವಿಠ್ಠಲ ಪಾರ್ವತಿ ಮತ್ತು ಅವರ ಮಾವ ನಾನಪ್ಪ ಪಾರ್ವತಿ ಇಬ್ಬರನ್ನೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು ಪರಾಭವಗೊಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲಕ್ಷ್ಮಿ ವಿಠ್ಠಲ ಪಾರ್ವತಿ ಅವರು ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗನಿಂದ ಹೀನಾಯ ಸೋಲು ಅನುಭವಿಸಿದ್ದಾರೆ.

ಲಕ್ಷ್ಮಿ ಪಾರ್ವತಿ ಅವರು ಕಳೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಪ್ರಯತ್ನದಿಂದಾಗಿ ಗೆದ್ದಿದ್ದರು. ಆದರೆ ಈಚೆಗೆ ಅವರು ರಮೇಶ ಜಾರಕಿಹೊಳಿ ಅವರ ಆಪರೇಶನ್ ಕಮಲಕ್ಕೆ ಒಳಗಾಗಿದ್ದರು.

ಮಾವ, ಸೊಸೆ ಇಬ್ಬರೂ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಇಬ್ಬರೂ ತೀವ್ರ ಮುಖಭಂಗ ಅನುಭವಿಸಿದ್ದಾರೆ. ತನ್ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಆಪರೇಶನ್ ಫೇಲ್ ಆಗಿದೆ.

ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ತನ್ನನ್ನು ಗೆಲ್ಲಿಸಿದ್ದ ಲಕ್ಷ್ಮಿ ಹೆಬ್ಬಾಳಕರ್ ಗೆ ಕೈಕೊಟ್ಟು ಈಗ ತಾವೇ ಸೋಲನುಭವಿಸುವಂತಾಯಿತು.

ರಮೇಶ ಜಾರಕಿಹೊಳಿಗೆ ಗ್ರಾಮೀಣ ಕ್ಷೇತ್ರದಲ್ಲಿ ಅವಕಾಶವಿಲ್ಲ ಎನ್ನುವುದನ್ನು ಮತದಾರರು ತೋರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button