Kannada NewsLatest

ಗೋಕಾಕ್; 25 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ ಅಂದಾಜು ಮೊತ್ತ 25 ಕೋಟಿ ರೂ ಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶಂಕು ಸ್ಥಾಪನೆ ನೆರವೇರಿಸಿದರು.

ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು,ನೀರು ಸರಬರಾಜು ಕಾಮಗಾರಿಗಳೂ ಸೇರಿದಂತೆ ಎಸ್.ಎಫ್.ಸಿ ವಿಶೇಷ ಅನುದಾನದಡಿಯ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗೋಕಾಕ್ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಪೌರಾಯುಕ್ತರಾದ ಶಿವಾನಂದ ಹಿರೇಮಠ ಉಪಸ್ಥಿತರಿದ್ದರು.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button