![](https://pragativahini.com/wp-content/uploads/2021/03/ramesh-jarakiholi-1.jpg)
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.
ಯುವತಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ಕನ್ನಡಿಗರ ರಕ್ಷಣಾ ವೇದಿಕೆಯ ಪ್ರಕಾಶ್ ದೂರು ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಯುವತಿಗೆ ಸೂಕ್ತ ರಕ್ಷಣೆ ನೀಡಿ ಪೊಲೀಸ್ ಠಾಣೆಗೆ ಬಂದು ಹೇಳಿಕೆ ದಾಖಲಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ