Latest

ಸಂಪುಟ ವಿಸ್ತರಣೆ ಕಸರತ್ತು; ಬಿ.ಎಲ್.ಸಂತೋಷ್ ಭೇಟಿಯಾದ ಸಚಿವ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಯಾರಿಗೂ ಅನ್ಯಾಯವಾಗಲ್ಲ. ಸಚಿವ ಸ್ಥಾನ ನೀಡುವ ಭರವಸೆಯಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹಾಗೂ ಹಿರಿಯ ನಾಯಕ ಬಿ.ಎಲ್ ಸಂತೋಷ್ ಅವರನ್ನು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು ಅಲ್ಲದೇ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.

ಭೇಟಿ ಬಳಿಕ ಮಾತನಾಡಿದ ಸಚಿವ ಜಾರಕಿಹೊಳಿ, ಪಕ್ಷ ಬಿಟ್ಟು ಬಂದ ಯಾರಿಗೂ ಅನ್ಯಾಯವಾಗಲ್ಲ. ಎಲ್ಲರಿಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಅಂತಿಮವಾಗಿ ವರಿಷ್ಥರಿಗೆ ಬಿಟ್ಟದ್ದು ಎಂದರು.

Home add -Advt

Related Articles

Back to top button