ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಶಾಸಕ ರಮೇಶ್ ಜಾರಕಿಹೊಳಿ, ಅವರನ್ನು ರಾಜ್ಯಾಧ್ಯಕ್ಷರೆಂದು ಒಪ್ಪಿಕೊಂಡಿಲ್ಲ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರಾಮೇಶ್ ಜಾರಕಿಹೊಳಿ, ನಾನು ವಿಜಯೇಂದ್ರ ಜೊತೆ ಮಾತನಾಡಲ್ಲ. ಅವರು ರಾಜ್ಯಾಧ್ಯಕ್ಷರೆಂದು ಒಪ್ಪಿಕೊಂಡಿಲ್ಲ. ನಾನು ನೇರವಾಗಿ ನಮ್ಮ ಪಕ್ಷದ ಹೈಕಮಾಂಡ್ ಜೊತೆ ಮಾತನಾಡುತ್ತೇನೆ ಹೊರತು ಬೇರೆ ಯಾರ ಬಳಿಯೂ ಮಾತನಾಡಲ್ಲ ಎಂದರು.
ಇನ್ನು ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ, ಮುಡಾ ಹಗರಣಗಳ ವಿರುದ್ಧ ಈಗಾಗಲೇ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಹೋರಟ ನಡೆಸಿದೆ. ಮುಂಬರುವ ದಿನಗಳಲ್ಲಿ ಹೈಕಮಾಂಡ್ ನಿರ್ಧಾರ ಪಡೆದು ಯತ್ನಾಳ್ ಜೊತೆ ಸೇರಿ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಹಗರಣ. ಹೈಕಮಾಂಡ್ ನಿಂದ ಅನುಮತಿ ಪಡೆದು ಯತ್ನಾಳ್ ಹಾಗೂ ಇನ್ನೂ ಕೆಲ ನಾಯಕರ ಜೊತೆ ಸೇರಿ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ