ನಮ್ಮ ಜೊತೆ ಬಂದವರಿಗೆ ಸಚಿವ ಸ್ಥಾನ; ವರಿಷ್ಠರನ್ನು ಭೇಟಿಯಾಗಿ ಮನವಿ ಮಾಡಿದ್ದು ನಿಜ; ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಜೂತೆ ಬಂದ ಎಲ್ಲರಿಗೂ ಸಚಿವ ಸ್ಥಾನ ನೀಡಬೇಕು. ವರಿಷ್ಠರು ಎಲ್ಲರಿಗೂ ಅವಕಾಶ ನೀಡುವ ವಿಶ್ವಾಸವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಬಿ.ಎಲ್.ಸಂತೋಷ್ ಹಾಗೂ ವೈಷ್ಠರನ್ನು ಭೇಟಿಯಾಗಿ ಮನವಿ ಮಾಡಿದ್ದು ನಿಜ. ಯಾರಿಗೂ ಕಂಡಿಷನ್ ಹಾಕಿಲ್ಲ. ಆದರೆ ನಮ್ಮ ಜೊತೆ ತ್ಯಾಗ ಮಾಡಿ ಬಂದ ಎಲ್ಲರಿಗೂ ಸಂಪುಟ ವಿಸ್ತರಣೆ ವೇಳೆ ಸ್ಥಾನ ನೀಡಬೇಕು. ಯಾರಿಗೂ ಅನ್ಯಾಯವಾಗಬಾರದು ಎಂದು ಮನವಿ ಮಾಡಿದ್ದೇನೆ. ಶೀಘ್ರದಲ್ಲಿಯೇ ಸಿಹಿ ಸುದ್ದಿ ಬರುವ ನಿರೀಕ್ಷೆ ಇದೆ. ಯಾರ ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬುದು ಸಿಎಂ ಪರಮಾಧಿಕಾರಕ್ಕೆ ಬಿಟ್ಟದ್ದು. ಅವರ ನಿರ್ಧಾರಕ್ಕೆ ನಾವು ಬದ್ಧ ಎಂದರು.
ರಾಜಕೀಯದಲ್ಲಿ ಕೆಲವೊಮ್ಮೆ ಏರುಪೇರಾಗುವುದು ಸಹಜ. ಆದರೆ ಈಗ ಸಂಪುಟ ವಿಸ್ತರಣೆ ವೇಳೆ ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ಎಲ್ಲರಿಗೂ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ