ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬ್ಲ್ಯಾಕ್ ಮೇಲ್ ಮಾಡಿ 5 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರಾ ಎನ್ನುವ ಪ್ರಶ್ನೆ ಮೂಡಿದೆ.
ರಮೇಶ ಜಾರಕಿಹೊಳಿ ಎಸ್ಐಟಿ ಮುಂದೆ ಇಂತಹ ಹೇಳಿಕೆ ನೀಡಿದ್ದಾರೆ, ಆರೋಪಿಗಳು ಅದಕ್ಕೆ ಸಮಧಾನಗೊಳ್ಳದೆ 100 ಕೋಟಿ ರೂ. ಬೇಡಿಕೆ ಮುಂದಿಟ್ಟಿದ್ದರು. ಹಾಗಾಗಿ ಜಾರಕಿಹೊಳಿ ಅದನ್ನು ನಿರಾಕರಿಸಿದ್ದರು ಎನ್ನುವ ಅಂಶ ಎಸ್ಐಟಿ ದಾಖಲಿಸಿಕೊಂಡಿರುವ ರಮೇಶ ಜಾರಕಿಹೊಳಿ ಹೇಳಿಕೆಯಲ್ಲಿ ದಾಖಲಾಗಿದೆ ಎನ್ನಲಾಗುತ್ತಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ, ಸಿಡಿ ಪ್ರಕರಣದ ಹಿಂದೆ ನಾಲ್ವರು ಮಾಜಿ ಪತ್ರಕರ್ತರ ಗ್ಯಾಂಗ್ ಇದೆ ಎನ್ನುವ ಅನುಮಾನ ವ್ಯಕ್ತಪಡಿಸಿದೆ.
ನಾಲ್ವರು ಮಾಜಿ ಪತ್ರಕರ್ತರು ಸೇರಿ ರಮೇಶ್ ಜಾರಕಿಹೊಳಿಯವರನ್ನು ಖೆಡ್ಡಾದಲ್ಲಿ ಕೆಡವಲು ಪ್ಲಾನ್ ಮಾಡಿ 100 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ 5 ಕೋಟಿ ರೂಪಾಯಿ ವಸೂಲಿ ಮಾಡಿದ್ದರು ಎನ್ನಲಾಗಿದೆ. ಆದರೆ ಆರೋಪಿಗಳು ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ ಸಾಹುಕಾರ್ ಇದಕ್ಕೆ ಒಪ್ಪಿಲ್ಲ. ಇದೇ ಕಾರಣಕ್ಕೆ ಸಿಡಿ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ರಮೇಶ್ ಜಾರಕಿಹೊಳಿ ಸದಾಶಿವನಗರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ನನ್ನ ವಿರುದ್ಧ ನಾಲ್ಕು ತಿಂಗಳ ಹಿಂದೆ ಷಡ್ಯಂತ್ರ ನಡೆದಿತ್ತು. ನನ್ನ ಆಪ್ತ ನಾಗರಾಜ್ ಮೂಲಕ ಹಣಕ್ಕೆ ಪರೋಕ್ಷವಾಗಿ ಬೇಡಿಕೆ ಇಟ್ಟಿದ್ದರು. ನಾನು ಅದನ್ನು ನಿರ್ಲಕ್ಷಿಸಿದ್ದೆ. ಈ ವೇಳೆ ನನ್ನನ್ನು ರಾಜಕೀಯವಾಗಿ ಮುಗಿಸುವುದಾಗಿಯೂ ಹೇಳಿದ್ದರು. ನಾನು ಒತ್ತಡಕ್ಕೆ ಮಣಿದಿರಲಿಲ್ಲ. ಈಗ ನನ್ನ ವಿರುದ್ಧ ಸಿಡಿ ತಯಾರಿಸಿ ಷಡ್ಯಂತ್ರ ನಡೆಸಿ ಹರಿಬಿಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆದರೆ, ಬ್ಲ್ಯಾಕ್ ಮೇಲ್ ಮಾಡುತ್ತಿರುವಾಗಲೇ ರಮೇಶ ಜಾರಕಿಹೊಳಿ ಪೊಲೀಸ್ ದೂರನ್ನು ಏಕೆ ದಾಖಲಿಸಿಲ್ಲ ಎನ್ನುವ ಪ್ರಶ್ನೆ ಮೂಡಿದೆ.
ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ದಿನಕ್ಕೊಂದಲ್ಲ, ಕ್ಷಣಕ್ಕೊಂದು ತಿರುವು
ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್ : ಬೆಳಗಾವಿಯಲ್ಲಿ ಯುವತಿಯ ತಂದೆ ಕಿಡ್ನ್ಯಾಪ್ ದೂರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ