
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಬಯಲಾದ ಬೆನ್ನಲ್ಲೇ ಆತಂಕಕ್ಕೀಡಾಗಿರುವ ಬಾಂಬೆ ಫ್ರೆಂಡ್ಸ್ ಖ್ಯಾತಿಯ 6 ಸಚಿವರು ಇದೀಗ ಕೋರ್ಟ್ ಮೊರೆ ಹೋಗಿದ್ದಾರೆ.
ರಮೇಶ್ ರಾಸಲೀಲೆ ಸಿಡಿ ಸ್ಫೋಟದ ಬೆನ್ನಲ್ಲೇ ರಾಜ್ಯದ ಇನ್ನಷ್ಟು ಪ್ರಭಾವಿ ರಾಜಕಾರಣಿಗಳ ಸಿಡಿ ಇದ್ದು, ಅದನ್ನೂ ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ಬೆಡರಿಕೆ ಹಾಕುತ್ತಿರುವ ಬಗ್ಗೆ ಸುದ್ದಿಗಳು ಪ್ರಸಾರವಾಗಿದ್ದವು. ಇದರ ಬೆನ್ನಲ್ಲೇ ತಮ್ಮ ವಿರುದ್ಧ ಮಾನಹಾನಿಕಾರಕ ಸುದ್ದಿ ಪ್ರಸಾರವಾಗಬಾರದು, ಇಂತಹ ಸುದ್ದಿಗೆ ತಡೆ ನೀಡಬೇಕು ಎಂದು ಕೋರಿ ಬಾಂಬೆ ಫೆಂಡ್ಸ್ ಖ್ಯಾತಿಯ 6 ಸಚಿವರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಸಚಿವರಾದ ಡಾ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್ ಕೋರ್ಟ್ ಮೊರೆಹೋಗಿದ್ದಾರೆ ಎಂದು ತಿಳಿದುಬಂದಿದೆ.



