ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಲೇಡಿ ಎನ್ನಲಾದ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ ಎಂದು ಹೇಳಿದ್ದಾರೆ.
ಸಿಡಿಯಲ್ಲಿದ್ದ ಯುವತಿ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನನ್ನ ಹಳೇ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ. ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ನನಗಾದ ಅನ್ಯಾಯ ಅವರಿಗೆ ಆಗಬಾರದು. ನಾಳೆ ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಮಹಾ ಬಾಂಬ್ ಇದೆ. ಈ ವೇಳೆ ನಾನೇ ಮಾತನಾಡುತ್ತೇನೆ. ಅಲ್ಲಿಯವರೆಗೆ ಕಾಯಬೇಕು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸುವ ಸೂಚನೆ ನೀಡಿದ್ದಾರೆ.
ಇನ್ನು ಸಿಡಿ ಪ್ರಕರಣದಲ್ಲಿ ನನ್ನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಫ್ ಐಆರ್ ದಾಖಲಾದ ಮಾತ್ರಕ್ಕೆ ನಾನು ಅಪರಾಧಿಯಲ್ಲ. ನಾನು ಯಾವುದೇ ಜಾಮೀನು ಪಡೆದುಕೊಳ್ಳುವ ಅವಶ್ಯಕತೆ ಇಲ್ಲ. ಜಾಮೀನು ಪಡೆಯುವ ತಪ್ಪು ನಾನು ಮಾಡಿಲ್ಲ ಎಂದು ಹೇಳಿದ್ದಾರೆ.
ಒಟ್ಟಾರೆ ಇದೀಗ ನಾಳೆ 4-6 ಗಂಟೆವರೆಗೆ ರಮೇಶ್ ಜಾರಕಿಹೊಳಿ ಸಿಡಿಸುವ ಮಹಾ ಬಾಂಬ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ