ಪ್ರಗತಿವಾಹಿನಿ ಸುದ್ದಿ; ಹಾವೇರಿ: ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರವನ್ನು ವಜಾ ಮಾಡಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಿದ್ದರಾಮಯ್ಯ ಹೇಳಿದಾಕ್ಷಣ ವೇದಾಂತವಾಗಲ್ಲ ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪ್ರಕರಣವನ್ನು ನಮ್ಮ ಸರ್ಕಾರ ಈಗಾಗಲೇ ಎಸ್ ಐಟಿ ತನಿಖೆಗೆ ಒಪ್ಪಿಸಿದೆ. ಯುವತಿ ನೀಡಿದ ದೂರನ್ನು ಆಧರಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐಆರ್ ಕೂಡ ದಾಖಲಿಸಲಾಗಿದೆ. ಹಿಂದೆ ಮೇಟಿ ಪ್ರಕಣದಲ್ಲಿ ಕಾಂಗ್ರೆಸ್ ಸರ್ಕಾರ ಮೇಟಿ ವಿರುದ್ಧ ಎಫ್ ಐಆರ್ ಕುಡ ದಾಖಲಿಸಿರಲಿಲ್ಲ. ಯಾವುದೇ ತನಿಖೆಯನ್ನೂ ನಡೆಸಿರಲಿಲ್ಲ. ಆದರೆ ಸಿಡಿ ಪ್ರಕರಣದಲ್ಲಿ ನಮ್ಮ ಸರ್ಕಾರ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ ಎಂದರು.
ಇನ್ನು ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಸಾಬೀತಾದರೆ ಅವಶ್ಯಕತೆ ಇದೆ ಎಂದರೆ ಖಂಡಿತ ಅವರನ್ನು ಬಂಧಿಸಲಾಗುತ್ತದೆ. ಎಸ್ ಐಟಿ ತನಿಖೆ ನಡೆಸುತ್ತಿದೆ. ಮುಂದೆ ನೋಡೋಣ ಎಂದು ಹೇಳಿದರು.
ಹನಿಟ್ರ್ಯಾಪ್ ಬಗ್ಗೆ ಡಿ.ಸುಧಾಕರ್ ಬಾಯ್ಬಿಟ್ಟ ಸತ್ಯವೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ