
ಪ್ರಗತಿವಾಹಿನಿ ಸುದ್ದಿ; ಹಾಸನ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಸರ್ಕಾರ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಮಾತನಾಡಿದ ಸಿಎಂ ಬಿಎಸ್ ವೈ, ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಕಾನೂನು ತನ್ನ ಕೆಲಸ ಮಾಡಲಿದೆ. ಸರ್ಕಾರ ಯಾರ ಪರವಾಗಿಯೂ ಇಲ್ಲ. ಡಿಕೆಶಿ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದರು.
ಬೆಳಗಾವಿ: ಅಕ್ರಮ ಮರಳು ಅಡ್ಡೆ ಮೇಲೆ ದಾಳಿ; ಅಧಿಕಾರಿಗಳ ಮೇಲೆ ಕಲ್ಲು ತೂರಾಟ