Latest

ಸಿಡಿ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನರೇಶ್ ಹಾಗೂ ಶ್ರವಣ್ ಸಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ಸಿಡಿ ಪ್ರಕರಣ ಬಹಿರಂಗ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ವಿರುದ್ಧ ಬ್ಲ್ಯಾಕ್ ಮೇಲ್ ಪ್ರಕರಣ ದಾಖಲಿಸಿದ್ದರು. ಬಂಧನ ಭೀತಿಯಲ್ಲಿರುವ ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಎಸ್ ಐಟಿ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದೆ.

Home add -Advt

ಈ ನಡುವೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಮೂರು ಎಫ್ ಐಆರ್ ಗಳ ಬಗ್ಗೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ವರದಿ ಸಲ್ಲಿಸಿದೆ. ಎಸ್ ಐಟಿ ಮುಖ್ಯಸ್ಥರ ಸಹಿ ಇಲ್ಲದೇ ವರದಿ ಸಲ್ಲಿಸಿರುವುದಕ್ಕೆ ಗರಂ ಆದ ನ್ಯಾಯಾಲಯ ಜೂನ್ 17ರಂದು ಎಸ್ ಐಟಿ ಮುಖ್ಯಸ್ಥರ ಸಹಿ ಸಮೇತ ವರದಿ ನೀಡಲು ಸೂಚಿಸಿದೆ. ಅರ್ಜಿ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿದೆ.

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ; ಇಂದು ಮಹತ್ವದ ವಿಚಾರಣೆ
ಕೊರೊನಾಗೆ ನಾಟಿ ಮದ್ದು; ಆನಂದಯ್ಯ ಔಷಧಿಗೆ ಸರ್ಕಾರದ ಸಮ್ಮತಿ

Related Articles

Back to top button