ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಷಡ್ಯಂತ್ರದ ಮೂಲಕ ನನ್ನ ತೇಜೋವಧೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರದ ರೂವಾರಿ, ಎಲ್ಲ ರಾಜಕಾರಣಿಗಳ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಸಿಬಿಐಗೆ ವಹಿಸುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಪತ್ರವೊಂದನ್ನು ಸಿಎಂ ಅವರಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪತ್ರದಲ್ಲಿ ಹಲವು ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ. ಹಲವು ರಾಜಕಾರಣಿಗಳ, ಉನ್ನತ ಅಧಿಕಾರಿಗಳ ಸಿಡಿಗಳೂ ಇವೆ. ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ. ಐಎ ಎಸ್, ಐಪಿಎಸ್ ಅಧಿಕಾರಿಗಳಿಗೇ ಬೆದರಿಕೆ ಹಾಕಿದ್ದಾರೆ. ಸಿಡಿ ಮೂಲಕ ರಾಜಕಾರಣಿಗಳನ್ನು ಕಂಟ್ರೋಲ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ದೇವನಹಳ್ಳಿ ರೇಡ್ ನಲ್ಲಿ ಸಿಕ್ಕ ಸಿಡಿಗಳ ಬಗ್ಗೆಯೂ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ.
https://pragati.taskdun.com/kpcc-m-lakshmanpress-meetramesh-jarakiholid-k-shivakumaraudio-bomb/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ