ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಸಿನಿಮಾ ಆಗಲಿದೆಯಂತೆ. ಈಗಾಗಲೇ ಟೈಟಲ್ ಕೂಡ ರಿಜಿಸ್ಟರ್ ಆಗಿದೆಯಂತೆ.
ಫಿಲ್ಮ್ ಚೇಂಬರ್ ನಲ್ಲಿ ಸಿಡಿ ಲೇಡಿ ಎಂಬ ಶೀರ್ಷಿಕೆಯಲ್ಲಿ ಟೈಟಲ್ ರಿಜಿಸ್ಟರ್ ಆಗಿದೆಯಂತೆ. ಈ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ತಿಳಿಸಿದ್ದಾರೆ. ಮಾಜಿ ಸಚಿವರ ಸಿಡಿ ಪ್ರಕರಣ ಸಿನಿಮಾ ಆಗಲಿದ್ದು, ಸಿಡಿ ಲೇಡಿ ಎಂದು ಟೈಟಲ್ ರಿಜಿಸ್ಟರ್ ಮಾಡಿಸಿದ್ದೇನೆ. ಕಥೆ, ಚಿತ್ರಕಥೆ ಇನ್ನೂ ಸಿದ್ಧವಾಗಿಲ್ಲ. ಯಾವಾಗ ಸೆಟ್ಟೇರಲಿದೆ ಎಂಬುದನ್ನೂ ನಿರ್ಧರಿಸಿಲ್ಲ ಎಂದು ಹೇಳಿದರು.
ಒಟ್ಟಾರೆ ಮಾಜಿ ಸಚಿವರ ಸಿಡಿ ಪ್ರಕರಣ ಇದೀಗ ಸಿನಿಮಾ ಆಗಿ ತೆರೆಗೆ ಬರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ