LatestUncategorized

*ರಮೇಶ್ ಜಾರಕಿಹೊಳಿ ಸಿಡಿ ವಿಷಯ ಮಾತಾಡಿಲ್ಲ; ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಮೇಶ್ ಜಾರಕಿಹೊಳಿ ಅವರು ನನ್ನ ಜತೆಗೆ ಎರಡು ದಿನಗಳಿಂದ ಇದ್ದದ್ದು ನಿಜ. ಆದರೆ ಹಲವಾರು ಕಾರ್ಯಕ್ರಮಗಳು ಇದ್ದರಿಂದ ಅವರ ಜತೆಗೆ ಮಾತುಕತೆ ಆಗಿಲ್ಲ. ಸಿಡಿ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶಾಸಕ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಹಲವಾರು ಅರೋಪಗಳನ್ನು ಮಾಡಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಾಗಿ ಹೇಳಿರುವ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ರಮೇಶ ಜಾರಕಿಹೊಳಿ ಅವರು ಬಂದಾಗ ಅವರ ಜೊತೆಗೆ ಮಾತನಾಡುತ್ತೇನೆ ಎಂದರು.

ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಹೇಳಿದ್ದೇನು? ಯಾರ್ಯಾರಿಗೆಲ್ಲ ‘ಚುರುಕ್’ ಅನುಭವ ನೀಡಿದೆ ಬಜೆಟ್?

Home add -Advt

https://pragati.taskdun.com/what-did-nirmala-sitharaman-say-who-presented-the-budget/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button