
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಲಿ ತಾಲೂಕಿನ ಕಿರೆಸೂರು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಐವರು ಮೃತಪಟ್ಟಿದ್ದಾರೆ.
ಮೃತರನ್ನು ಸಾಗರದ ಮುರುಕೈ ಗ್ರಾಮದ ಶ್ವೇತಾ(29), ಅಂಜಲಿ (26), ಸಂದೀಪ್ (26) ವಿಠಲ (55), ಶಶಿಕಲಾ (40) ಎಂದು ಗುರುತಿಸಲಾಗಿದೆ.
ಹೋಟೆಲ್ ವ್ಯಾಪರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಎರಡು ದಿನಗಳ ಹಿಂದಷ್ಟೇ ಶ್ವೇತಾ ನಿಶ್ಚಿತಾರ್ಥ ಕೂಡ ನೆರವೇರಿತ್ತು,
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.