Latest

ಸಿಡಿ ಪ್ರಕರಣ; ಯುವತಿ ಊರು ಪತ್ತೆ, ನೋಟೀಸ್ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದು, ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ತಿಳಿಸಿದ್ದಾರೆ.

ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ನಿನ್ನೆ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ಯುವತಿ ಪ್ರತ್ಯಕ್ಷವಾಗಿದ್ದು, ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು. ಸೂಕ್ತ ಭದ್ರತೆ ನೀಡುವಂತೆ ಗೃಹ ಸಚಿವರು ಎಸ್ ಐಟಿಗೆ ಸೂಚನೆ ನೀಡಿದ್ದಾರೆ.

ಈ ನಡುವೆ ಸಿಡಿ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಯುವತಿ ಇದ್ದ ಪಿಜಿ, ಮನೆಯ ಮಾಲೀಕ ಹಾಗೂ ಯುವತಿಯ ಸ್ನೇಹಿತರಿಗೂ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ತಿಳಿಸುವಂತೆ ಸೂಚಿಸಿದ್ದಾರೆ.

ಯುವತಿ ವಿಜಯಪುರ ಜಿಲ್ಲೆ ಬಸವನಬಾಗೆವಾಡಿ ತಾಲೂಕಿನ ಮೂಲದವಳು ಎಂದು ಪತ್ತೆ ಮಾಡಲಾಗಿದ್ದು ಅಲ್ಲಿಗೂ ನೋಟೀಸ್ ಜಾರಿಗೊಳಿಸಲಾಗಿದೆ.

ಸಿಡಿ ಪ್ರಕರಣಕ್ಕೆ ಮಹತ್ವದ ತಿರುವು; ಇಂದು, ನಾಳೆ ನಿರ್ಣಾಯಕ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button