ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಬೆಂಗಳೂರು ಪೊಲೀಸ್ ಕಮೀಷ್ನರ್ ಬಳಿ ವಕೀಲ ಜಗದೀಶ್ ಮೂಲಕ ದೂರು ದಾಖಲಿಸಿದ್ದಾಳೆ.
ಯುವತಿ ನೀಡಿದ ದೂರಿನ ಪ್ರತಿ ಮಾಧ್ಯಮಕ್ಕೆ ಲಭ್ಯವಾಗಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ತನಗೆ ಸರ್ಕಾರಿ ಕೆಲಸ ಕೊಡುವುದಾಗಿ ಹೇಳಿ ನಂಬಿಸಿ ಲೈಂಗಿಕ ಸಂಪರ್ಕ ಹೊಂದಿ, ಬಳಿಕ ಕೆಲಸ ಕೊಡಿಸದೇ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸವಿವರವಾಗಿ ಉಲ್ಲೇಖಿಸಿದ್ದಾಳೆ.
ಪೊಲೀಸರಿಗೆ ಯುವತಿ ನೀಡಿದ ದೂರಿನಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ, ವಿಡಿಯೋ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾಗಿ ತಿಳಿಸಿದ್ದಾಳೆ.
ತಾನು ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದು, ಶಾರ್ಟ್ ಫಿಲ್ಮ್ ಕುರಿತಾಗಿ ಅಂದು ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೆ. ಕರೆ ಮಾಡಿ ತಿಳಿಸುವುದಾಗಿ ಹೇಳಿ ನಂಬರ್ ಪಡೆದಿದ್ದರು. ಬಳಿಕ ಕರೆ ಮಾಡಿ ನನ್ನ ಬಗ್ಗೆ ನನ್ನ ಕುಟುಂಬದ ಬಗ್ಗೆ ವಿಚಾರಿಸುತ್ತಾ ಸಲುಗೆಯಿಂದ ಮಾತನಾಡಿದ್ದರು. ಪ್ರಭಾವ ಬೀರಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿದ್ದರು. ಆದರೆ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಕೇಳಿದ್ದರು. ನನ್ನ ಬಳಿ ಅಷ್ಟೊಂದು ಹಣವಿಲ್ಲ ಎಂದು ಹೇಳಿದಾಗ ಎಲ್ಲಾ ರೀತಿಯ ಸಹಕಾರ ನೀಡಿ ಖುಷಿ ನೀಡಿದರೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ಅದನ್ನು ನಂಬಿ ಅವರು ಹೇಳಿದಂತೆ ನಡೆದುಕೊಂಡಿದ್ದಾಗಿ ಯುವತಿ ತಿಳಿಸಿದ್ದಾಳೆ. ಆದರೆ ತನಗೆ ಕೆಲಸ ಕೊಡದೇ ಇದ್ದಾಗ ಪ್ರಶ್ನೆ ಮಾಡಿದ್ದಕ್ಕೆ ಕೆಲಸದ ವಿಚಾರ ಆಮೇಲೆ ನೋಡೋಣ ಎಂದು ಅವಾಯ್ಡ್ ಮಾಡಲು ಆರಂಭಿಸಿದರು. ರಮೇಶ್ ಜಾರಕಿಹೊಳಿಯೇ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.
(ದೂರಿನಲ್ಲಿ ಹಲವಾರು ಅಶ್ಲೀಲ ಪದಗಳನ್ನು ಬಳಸಲಾಗಿದ್ದು ಅದು ಪ್ರಕಟಣೆಗೆ ಯೋಗ್ಯವಾಗಿಲ್ಲ)
ಯುವತಿ ದೂರು ಕೊಡಲಿ; ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದ ರಮೇಶ್ ಜಾರಕಿಹೊಳಿ
ರಮೇಶ ಜಾರಕಿಹೊಳಿ ವಿರುದ್ಧ ಇಂದೇ ದೂರು: ಸಿಡಿ ಲೇಡಿ ಮತ್ತೊಂದು ವಿಡೀಯೋ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ