ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ 24ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಸಂತ್ರಸ್ತ ಯುವತಿ 24ನೇ ಎಸಿಎಂಎಂ ಕೋರ್ಟ್ ಮುಂದೆ ನ್ಯಾಯಾಧೀಶರ ಎದುರು ಹಾಜರಾಗಿ ಹೇಳಿಕೆ ನೀಡುತ್ತಿದ್ದಾಳೆ ಎಂದು ಹೇಳಲಾಗಿತ್ತು. ಆದರೆ ಎಸಿಎಂಎಂ ಕೋರ್ಟ್ ಗೆ ಯುವತಿ ಹಾಜರಾಗಿಲ್ಲ. ಬದಲಾಗಿ ಬೆಂಗಳೂರಿನ ವಸಂತ ನಗರದಲ್ಲಿ ಗುರುನಾನಕ್ ಭವದಲ್ಲಿರುವ ವಿಶೇಷ ಕೋರ್ಟ್ ನಲ್ಲಿ ಜಡ್ಜ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿದ್ದಾಳೆ.
ಯುವತಿಯ ಭದ್ರತೆ ಹಾಗೂ ಗೌಪ್ಯತೆಯ ಕಾರಣಕ್ಕಾಗಿ ಸಂತ್ರಸ್ತ ಯುವತಿಯನ್ನು ವಿಶೇಷ ಕೋರ್ಟ್ ನಲ್ಲಿ ಜಡ್ಜ್ ಮುಂದೆ ಹಾಜರುಪಡಿಸಲಾಗಿದೆ. ಸೆಕ್ಷನ್ 164ರ ಅಡಿಯಲ್ಲಿ ಯುವತಿಯ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ