ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂಪಾಯಿ ಡೀಲ್ ಆಗಿದೆ ಎಂದು ನಾನು ಮೊದಲೇ ಹೇಳಿದ್ದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಇದೀಗ ಎಸಿಬಿಯಲ್ಲಿ ದೂರು ದಾಖಲಾಗಿದೆ.
ವಕೀಲ ಮಂಜುನಾಥ್ ಹಾಗೂ ಸಿದ್ದೇಶ್ ಎಂಬುವವರು ಮಾಜಿ ಸಚಿವ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ.
5 ಕೋಟಿ ಹಣದ ವ್ಯವಹಾರ ಗೊತ್ತಿದ್ದರೂ ಸದನದಲ್ಲಿ ಪ್ರಸ್ತಾಪಿಸಿಲ್ಲ. ಯಾವುದೇ ತನಿಖಾ ಸಂಸ್ಥೆಗೆ ಮಾಹಿತಿ ನೀಡಿಲ್ಲ. ಕೇವಲ ಮಾಧ್ಯಮಗಳ ಮುಂದೆ ಹೇಳಿಕೆ ನೀಡಲಾಗುತ್ತಿದೆ. ಮಾಜಿ ಸಚಿವರ ಇಷ್ಟೊಂದು ದೊಡ್ಡ ಮೊತ್ತದ ಹಣದ ಮೂಲವೇನು? ಆ ಹಣವನ್ನು ಯಾರು ಹೇಗೆ ನೀಡಿದ್ದಾರೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಸಿಡಿ ಯುವತಿ ಮನೆಯಲ್ಲಿ 23 ಲಕ್ಷ ರೂ. ಹಣ ಪತ್ತೆ
ಸಿಡಿ ಪ್ರಕರಣ; ನಾನು ಮೊದಲೇ ಹೇಳಿಲ್ವಾ ಎಂದ ಹೆಚ್.ಡಿ.ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ