Latest

ಸಿಡಿ ಪ್ರಕರಣ; ಕಿಂಗ್ ಪಿನ್ ಆರೋಪಿಗಳಿಗೆ ಬಿಗ್ ರಿಲೀಫ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಹೇಳಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಹನಿಟ್ರ್ಯಾಪ್, ಬ್ಲ್ಯಾಕ್ ಮೇಲ್ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ಬೆಳಕಿಗೆ ಬಂದಾಗಿನಿಂದ ಬಂಧನ ಭೀತಿಯಲ್ಲಿರುವ ಆರೋಪಿಗಳು ತಲೆಮರೆಸಿಕೊಂಡಿದ್ದು, ನಿರೀಕ್ಷಣ ಅಜಾಮಿನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Home add -Advt

ಅರ್ಜಿ ವಿಚಾರಣೆ ನಡೆಸಿದ 91ನೇ ಸಿಸಿ ಹೆಚ್ ನ್ಯಾಯಾಲಯ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಿ ತೀರ್ಪು ಪ್ರಕಟಿಸಿದೆ.
ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ

Related Articles

Back to top button