Latest

ಸಿಡಿ ಕೇಸ್; ಎಸ್ ಐಟಿ ಮುಂದೆ ಹಾಜರಾದ ಕಿಂಗ್ ಪಿನ್ ಗಳು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಡಿ ಪ್ರಕರಣ ಬಹಿರಂಗವಾದಾಗಿನಿಂದ ಕಳೆದ 100 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಬೆಂಗಳೂರಿನ ಆಡುಗೋಡಿ ಎಸ್ ಐಟಿ ಟೆಕ್ನಿಕಲ್ ಸೆಲ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ಹಾಗೂ ಶ್ರವಣ್ ವಿರುದ್ಧ ರಮೇಶ್ ಜಾರಕಿಹೊಳಿ ಹನಿ ಟ್ರ್ಯಾಪ್, ಬ್ಲ್ಯಾಕ್ ಮೇಲ್ ಸೇರಿದಂತೆ ದೂರು ದಾಖಲಿಸಿದ್ದರು.

ಸಿಡಿ ಕೇಸ್ ನಲ್ಲಿ ಬಂಧನ ಭೀತಿಯಲ್ಲಿದ್ದ ನರೇಶ್ ಹಾಗೂ ಶ್ರವಣ್ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದ್ದ ನ್ಯಾಯಾಲಯ 5 ದಿನಗಳಲ್ಲಿ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿತ್ತು.
ರಾಜ್ಯ ಬಿಜೆಪಿಯಲ್ಲಿ ಮತ್ತೆ ಗೊಂದಲ; ಅರವಿಂದ ಬೆಲ್ಲದ್ ದೆಹಲಿ ಭೇಟಿ ಊಹಾಪೋಹ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button