Latest

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಯುವತಿ ಸೇರಿ ನಾಲ್ವರು ಎಸ್ ಐಟಿ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಹಾಗೂ ಓರ್ವ ಯುವತಿ ಸೇರಿದಂತೆ ಒಟ್ಟು ನಾಲ್ವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ವಿಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ರೂಂ ಮಾಡಿಕೊಂಡಿದ್ದ ಇಬ್ಬರು ಯುವಕರು ಹಾಗೂ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಓರ್ವ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆಓರ್ವ ಯುವತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button