Latest

ಸಿಡಿ ಬಹಿರಂಗ ಕೇಸ್; ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಸಂತ್ರಸ್ತ ಯುವತಿಯೊಂದಿಗೆ ಮಾತನಾಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯೊಂದಿಗೆ ಮಾತನಾಡಿದ್ದೇನೆ. ಏನಾದರೂ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಹೇಳಿದ್ದೇನೆ. ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದರು.

Home add -Advt

ಸದ್ಯ ಸಿಡಿ ಬಹಿರಂಗ ಕೇಸ್ ಕೋರ್ಟ್ ನಲ್ಲಿದೆ. ವಿಚಾರಣೆ ಹಂತದಲ್ಲಿರುವುದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಏನೂ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಹೇಳಿದರು.
ಸಿಡಿ ಕೇಸ್: ಯುವತಿಗೆ ಬಂಧನ ಭೀತಿ…!

Related Articles

Back to top button