Kannada NewsLatest

ರಮೇಶ ಜಾರಕಿಹೊಳಿ ಗೋಕಾಕದಲ್ಲಿದ್ದಾರೆ, ಅವರ ಆರೋಗ್ಯ ಸರಿಯಿಲ್ಲ – ವಕೀಲರ ಹೇಳಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಸಂತ್ರಸ್ತ ಯುವತಿ ನೀಡಿದ ದೂರು ಆಧರಿಸಿ ರಮೇಶ್ ಜಾರಕಿಹೊಳಿಗೆ ನೋಟೀಸ್ ನೀಡಲಾಗಿದೆ.

ಸಂತ್ರಸ್ತ ಯುವತಿ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ ದಿನದಿಂದ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ.  ಇಂದು ಎಸ್ ಐಟಿ ವಿಚಾರಣೆಗೆ ಹಾಜರಾಗುವುದು ಅನುಮಾನ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅಗತ್ಯ ಮಾಹಿತಿ ಪಡೆಯಬೇಕಿದ್ದು, ಶುಕ್ರವಾರ ಬೆಳಿಗ್ಗೆ 10ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟೀಸ್ ನೀಡಿತ್ತು. ಆದರೆ ಈವರೆಗೆ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿಲ್ಲ.

ಈ ನಡುವೆ, ಅನಾರೋಗ್ಯ ಕಾರಣ ನೀಡಿ ರಮೇಶ್ ಜಾರಕಿಹೊಳಿ ಪರ ವಕೀಲರು ವಿಚಾರಣೆಗೆ ಹಾಜರಾಗಲು 3-4 ದಿನಗಳ ಕಾಲ ಸಮಯಾವಕಾಶ ನೀಡುವಂತೆ ಎಸ್ ಐಟಿ ಬಳಿ ಮನವಿ ಮಾಡಿದ್ದಾರೆ.

Home add -Advt

ರಮೇಶ ಜಾರಕಿಹೊಳಿ ಗೋಕಾಕದಲ್ಲಿದ್ದು, ಅವರ ಆರೋಗ್ಯ ಪರಿಸ್ಥಿತಿ ಸರಿಇಲ್ಲ. ಹಾಗಾಗಿ ಸಮಯಾವಕಾಶ ಬೇಕು ಎಂದು ಅವರ ವಕೀಲರು ವಿನಂತಿಸಿಕೊಂಡಿದ್ದಾರೆ.

ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ; ಚಾಮುಂಡಿ ದೇವಿ ಮೊರೆ ಹೋದ ಈಶ್ವರಪ್ಪ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button