Kannada NewsLatest

ತವಗದಿಂದ ಗೋಕಾಕ್ ವರೆಗೆ ದೀರ್ಘದಂಡ ನಮಸ್ಕಾರ; ರಮೇಶ್ ಬೆಂಬಲಿಗರ ಮುಂದುವರೆದ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಂಡಿದ್ದು, ದಿನಕ್ಕೊಂದು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ರಾಸಲೀಲೆ ಸಿಡಿ ಪ್ರಕರಣದ ದೂರುದಾರ ದಿನೇಶ್ ಕಲ್ಲಹಳ್ಳಿ ಬಂಧನಕ್ಕೆ ಆಗ್ರಹಿಸಿ, ರಮೇಶ್ ಜಾರಕಿಹೊಳಿ ಬೆಂಬಲಿಗರು ತವಗದಿಂದ ಗೋಕಾಕ್ ವರೆಗೆ ದೀರ್ಘದಂಡ ನಮಸ್ಕಾರ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಲಕ್ಕಪ್ಪ ಹಾಗೂ ಶ್ರೀಕಾಂತ್ ದುಂಡರಗಿ ಸೇರಿದಂತೆ ಹಲವರು ಈ ಧರಣಿಯಲ್ಲಿ ಪಾಲ್ಗೊಂಡಿದ್ದು, ನಕಲಿ ಸಿಡಿ ತಯಾರಿಸಿ ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಲಾಗುತ್ತಿದೆ. ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Home add -Advt

Related Articles

Back to top button