ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಕುರಿತ ಸಿಡಿ ಬಿಡುಗಡೆಗೊಂಡಿದೆ.
ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಕರ್ಮಕಾಂಡದ ಸಿಡಿ ಬಿಡುಗಡೆ ಮಾಡಿದ್ದಾರೆ. ಸಚಿವ ರಮೇಶ್ ಅಶ್ಲೀಲವಾಗಿ ಕಾಣಿಸಿಕೊಂಡಿರುವ ದೃಶ್ಯ ಇದೀಗ ಜಗಜ್ಜಾಹೀರಾಗಿದೆ.
ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ರಮೇಶ ಜಾರಕಿಹೊಳಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವಳ ಕುಟುಂಬದವರು ನನ್ನನ್ನು ಸಂಪರ್ಕಿಸಿ ದೂರು ನೀಡುವಂತೆ ಕೋರಿದ್ದಾರೆ ಎಂದು ದಿನೇಶ ಕಲ್ಲಹಳ್ಳಿ ತಿಳಿಸಿದ್ದಾರೆ.
ಸಚಿವರ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಿ ದಿನೇಶ್ ಕಲ್ಲಹಳ್ಳಿ ಪೊಲೀಸ್ ಕಮೀಷನರ್ ಅವರಿಗೆ ದೂರು ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಈವರೆಗೂ ಈ ಕುರಿತು ಎಫ್ಐಆರ್ ಆಗಿಲ್ಲ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕಿ ತೇಜಸ್ವಿನಿ ಗೌಡ, ಇಂತಹ ಗಲೀಜನ್ನು ಪಕ್ಷ ಸಹಿಸುವುದಿಲ್ಲ. ಆದರೆ ಪ್ರಕರಣ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ