ಇದು ನನ್ನ ವಿರುದ್ಧದ ಷಡ್ಯಂತ್ರ ಎಂದ ಸಚಿವ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ರಮೇಶ್ ಜಾರಕಿಹೊಳಿ, ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಯನ್ನು ನೋಡಿದ್ದೇನೆ. ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಇದು ಒಂದು ರಾಜಕೀಯ ಷಡ್ಯಂತ್ರದ ಭಾಗ ಎಂದು ತಿಳಿಸಿದ್ದಾರೆ.
ಸಂತ್ರಸ್ತೆ ಅನ್ನುವವರು ದೂರು ಕೊಡದೇ ಯಾರೋ ಮೂರನೇ ವ್ಯಕ್ತಿ ದೂರು ನೀಡಿರುವುದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯೇ ಆಗಿದೆ. ದಯವಿಟ್ಟು ಮಾಧ್ಯಮಗಳ ಸನ್ಮಿತ್ರರು ಸಹಕರಿಸಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ನೂರಕ್ಕೆ ನೂರು ಫೇಕ್ ವೀಡಿಯೋ. ನಾನು ತಪ್ಪು ಮಾಡಿಲ್ಲ. ನಾನೇಕೆ ರಾಜಿನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.
ನಾನು ಇನ್ನೂ ವಿಡಿಯೋ ನೋಡಿಲ್ಲ. ಆದರೆ ನನಗೆ ಆ ಯುವತಿ ಯಾರೆಂದೂ ಗೊತ್ತಿಲ್ಲ. ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರೊಂದಿಗೆ ಈ ಕುರಿತು ಮಾತನಾಡುತ್ತೇನೆ ಎಂದೂ ಅವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ